ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಚಾರ್ಜ್ ಶೀಟ್ನಲ್ಲಿ ಇದುವರೆಗಿನ ತನಿಖೆಯ ಪ್ರಕಾರ, 6 ಕುಸ್ತಿಪಟುಗಳು ಮಾಡಿದ ಆರೋಪಗಳಿಗಾಗಿ ಅವರನ್ನು ವಿಚಾರಣೆ ಒಳಪಡಿಸಬಹುದು ಹಾಗೂ ಶಿಕ್ಷೆಗೆ ಗುರುಪಡಿಸಬಹುದು’ ಎಂದು ಹೇಳಲಾಗಿದೆ. ಇದುವರೆಗಿನ ತನಿಖೆಯ ಆಧಾರದ ಮೇಲೆ ಬ್ರಿಜ್ ಭೂಷಣ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಬಹುದಿತ್ತು. ಅಲ್ಲದೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ವಿಧಿಸಬಹುದು, ಜೂನ್ 13 ರಂದು ಸಲ್ಲಿಸಲಾದ ಚಾರ್ಜ್ ಶೀಟ್, ಕುಸ್ತಿಪಟುಗಳ ಮೇಲೆ ಸಿಂಗ್ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೆಹಲಿ ಪೊಲೀಸ್ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ದೆಹಲಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದರು.