News Karnataka Kannada
Sunday, April 28 2024
ದೆಹಲಿ

ಹಾಡು ಹಗಲೇ ನಡುರಸ್ತೆಯಲ್ಲಿ ಯುವತಿಯನ್ನು ಚಾಕುವನಿಂದ ಇರಿದ ಯುವಕ

ಯುವಕನೋರ್ವ ಹಾಡು ಹಗಲೇ ಯುವತಿಗೆ 8 ಬಾರಿ ಚಾಕು ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. 22 ವರ್ಷದ ಅಮನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಈತ ಸನಾ ಎಂಬಾಕೆಗೆ ಚಾಕುವಿನಿಂದ ಇರಿದಿದ್ದಾನೆ.
Photo Credit : NewsKarnataka

ದೆಹಲಿ: ಯುವಕನೋರ್ವ ಹಾಡು ಹಗಲೇ ಯುವತಿಗೆ 8 ಬಾರಿ ಚಾಕು ಇರಿದಿರುವ ಘಟನೆ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದೆ. 22 ವರ್ಷದ ಅಮನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಈತ ಸನಾ ಎಂಬಾಕೆಗೆ ಚಾಕುವಿನಿಂದ ಇರಿದಿದ್ದಾನೆ.

ಸನಾಳನ್ನು ಅಟ್ಟಾಡಿಸಿಕೊಂಡು ಚಾಕುವಿನಿಂದ ದಾಳಿ ಮಾಡಿದ್ದಾನೆ. ಆತ ಚಾಕುವಿನಿಂದ ಚುಚ್ಚುತ್ತಿದ್ದಂತೆಯೇ ದಾರಿಹೋಕರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಆತ ಅವರ ಮೇಲೂ ದಾಳಿ ಮಾಡಲು ಮುಂದಾಗಿದ್ದು, ಬಳಿಕ ತಪ್ಪಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಖರ್ಜಿ ನಗರದ ವಿದ್ಯಾರ್ಥಿಗಳು ಅಮಾನ್​ನನ್ನು ಗೇಲಿ ಮಾಡಿದ್ದರು. ಆ ಪ್ರದೇಶದಲ್ಲಿ ಓಡಾಡುತ್ತಿದ್ದವರೆಲ್ಲಾ ಆತನನ್ನು ಹುಚ್ಚ ಎಂದು ಕರೆಯುತ್ತಿದ್ದರು. ಸನಾ ಸರ್ಕಾರಿ ಪರೀಕ್ಷೆಗೆ ತಯಾರಿ ನಡೆಸಲು ಗ್ರಂಥಾಲಯಕ್ಕೆ ಹೋಗುತ್ತಿದ್ದಳು ಈ ವೇಳೆ ಸನಾ ಕೂಡ ಆತನನ್ನು ಗೇಲಿ ಮಾಡಿದ್ದಾಳೆ ಇದರಿಂದ ಕೋಪಗೊಂಡ ಆತ ಅಲ್ಲೇ ತರಕಾರಿ ಅಂಗಡಿಯಲ್ಲಿದ್ದ ಚಾಕು ತೆಗೆದುಕೊಂಡು ಆಕೆಗೆ ಚುಚ್ಚಿದ್ದಾನೆ. ಸುಮಾರು 8 ಬಾರಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ.

ಇನ್ನು ಘಟನೆಯಲ್ಲಿ ಯುವತಿಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸದ್ಯ ಯುವಕ ಚಾಕು ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು