Categories: ದೇಶ

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 24 ಲಕ್ಷ ದೀಪಗಳಿಂದ ಅಲಂಕಾರ: ವಿಡಿಯೋ ನೋಡಿ

ಉತ್ತರಪ್ರದೇಶ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್‌.ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ

ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್‌ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.

ದೀಪೋತ್ಸವ ಹಿನ್ನೆಲೆ. ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು

Umesha HS

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago