ಮುಂಬೈ : ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಆದೇಶಿಸಿದೆ.
ಬಿಜೆಪಿ ನಾಯಕ ನಿತೇಶ್ ರಾಣೆ ಅವರು ದಿಶಾ ಸಾಲಿಯಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಅವರನ್ನು ಗುರಿಯಾಗಿಸಿದರು. ಅವರ ತಂದೆ ಮತ್ತು ಶಿವಸೇನಾದ ಹಿರಿಯ ನಾಯಕ ಉದ್ಧವ್ ಠಾಕ್ರೆ ಈ ವಿಷಯವನ್ನು ತಿಳಿಸಬೇಕೆಂದು ಒತ್ತಾಯಿಸಿದರು.
ಜೂನ್ 8, 2020 ರಂದು ಮುಂಬೈನ ಮಲಾಡ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಿಂದ ಬಿದ್ದು ಸಾಲಿಯಾನ್ ಸಾವಿಗೀಡಾಗಿದ್ದರು.ಈ ಸಂಬಂಧ ಮುಂಬೈ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.