ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಸಚಿವೆ ಶೋಭಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ, ಸಿಎಂ ಎಂಕೆ ಸ್ಟಾಲಿನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ.
ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬಾಸ್ಟ್ ಹಿಂದೆ ತಮಿಳುಗರು ಇದ್ದಾರೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು , ಬಾಂಬ್ ಇಡಲು ಬೆಂಗಳೂರಿಗೆ ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ತಮಿಳುನಾಡು-ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಹೀಗಾಗಿ ಚುನಾವಣಾ ಆಯೋಗವು ಅವರ ವಿರುದ್ಧ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಜೊತೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.