ನವದೆಹಲಿ: ಮಹಿಳಾ ದಿನಾಚರಣೆಯಂದೇ ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಮಾಜ ಸೇವೆ, ದಾನ, ಶಿಕ್ಷಣ ಕ್ಷೇತ್ರದಲ್ಲಿ ಸುಧಾಮೂರ್ತಿ ಕೊಡುಗೆ ಅಪಾರ, ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿಶಕ್ತಿಗೆ ಸಾಕ್ಷಿ, ಸುಧಾಮೂರ್ತಿ ಅವರಿಗೆ ಪಾರ್ಲಿಮೆಂಟ್ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಣೆಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
I am delighted that the President of India has nominated @SmtSudhaMurty Ji to the Rajya Sabha. Sudha Ji's contributions to diverse fields including social work, philanthropy and education have been immense and inspiring. Her presence in the Rajya Sabha is a powerful testament to… pic.twitter.com/lL2b0nVZ8F
— Narendra Modi (@narendramodi) March 8, 2024