Categories: ದೇಶ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 65 ನೇ ಜನ್ಮದಿನ. ದ್ರೌಪದಿ ಮುರ್ಮು ಅವರು ಜುಲೈ 5, 2022 ರಂದು ಭಾರತದ 15ನೇ ರಾಷ್ಟ್ರಪತಿಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಮುರ್ಮು ಅವರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡರು. ರಾಷ್ಟ್ರಪತಿ ಮುರ್ಮು ಅವರು ಮೃದು ಹಾಗೂ ವಿನಮ್ರ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ದೃಢ ಹಾಗೂ ಕಠಿಣ ಪರಿಶ್ರಮದಿಂದ ರಾಜಕೀಯಕ್ಕೆ ಕಾಲಿಟ್ಟರು.

ದ್ರೌಪದಿ ಮುರ್ಮು ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದಲ್ಲಿ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ 1958ರ ಜೂನ್ 20 ರಂದು ಜನಿಸಿದ ಮುರ್ಮು ಅವರು ಬ್ಯಾಂಕರ್ ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು, ಅವರು 2014 ರಲ್ಲಿ ನಿಧನರಾದರು. ಅವರ ಇಬ್ಬರು ಪುತ್ರರೂ ಕೂಡ ಮೃತಪಟ್ಟಿದ್ದಾರೆ. ಬಳಿಕ ಮಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ವಿಯಾದರು.

ಇನ್ನೂ ಬಿಜೆಪಿಯ ಸಿದ್ಧಾಂತಗಳಿಗೆ ಸರಿಯಾಗಿ ಒಗ್ಗುವ ಮಹಿಳೆ ಎನಿಸಿಕೊಂಡಿರುವ ದ್ರೌಪದಿ, ಪ್ರಸಿದ್ಧ ಬುಡಕಟ್ಟು ನಾಯಕಿ ಮಾತ್ರವಲ್ಲದೆ ಸಮರ್ಥ ಆಡಳಿತಗಾರರೂ ಆಗಿದ್ದಾರೆ, ಇದನ್ನು ಅವರು ಜಾರ್ಖಂಡ್‌ನ ರಾಜ್ಯಪಾಲರಾಗಿ ಅಧಿಕಾರಾವಧಿಯಲ್ಲಿ ಸಾಬೀತುಪಡಿಸಿದ್ದಾರೆ. ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲೆ ಎನಿಸಿಕೊಂಡಿದ್ದರು. ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, ‘ಬುದ್ಧಿವಂತಿಕೆ ಮತ್ತು ಘನತೆಯ ದಾರಿದೀಪ’ ಎಂದು ಬಣ್ಣಿಸಿದ್ದಾರೆ.

‘ರಾಷ್ಟ್ರಪತಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಬುದ್ಧಿವಂತಿಕೆ, ಘನತೆ ಮತ್ತು ನಮ್ಮ ಜನರ ಕಲ್ಯಾಣಕ್ಕಾಗಿ ಬದ್ಧತೆಯ ದಾರಿದೀಪ, ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ ಅವರ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ. ಅವರ ಸಮರ್ಪಣೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ರಾಜಕೀಯ ನಾಯಕರು, ಆಪ್ತ ವಲಯದವರು ಹಾಗೂ ಅವರ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.

 

 

 

Ashitha S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

7 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

8 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

12 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

22 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

28 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

43 mins ago