ಪ್ರಾಣಿಯ ಪ್ರಾಣ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಭೋಪಾಲ್: ಜಲಾಶಯಕ್ಕೆ ಬಿದ್ದ ನಾಯಿಯನ್ನು ರಕ್ಷಿಸಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮೃತನನ್ನು ೨೩ ವರ್ಷದ ಸರಳ್ ನಿಗಮ್ ಎಂದು ಗುರುತಿಸಲಾಗಿದೆ.

ಗೆಳತಿಯರೊಂದಿಗೆ ಕೇರ್ವಾ ಜಲಾಶಯದ ಬಳಿ ತಿರುಗಾಡಲು ಹೋಗಿದ್ದ ಸರಳ್, ಸ್ನೇಹಿತೆಯ ಶ್ವಾನ ನೀರಿಗೆ ಬಿದ್ದದ್ದನ್ನು ಕಂಡು ಅದನ್ನು ರಕ್ಷಿಸಲು ನೀರಿಗೆ ಧುಮುಕಿದ್ದ. ಬಳಿಕ ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿದವನು ಶವವಾಗಿ ಪತ್ತೆಯಾಗಿದ್ದಾನೆ.

ಸುಧೀರ್ ನಿಗಮ್ ದಂಪತಿಯ ಏಕೈಕ ಕುವರನಾಗಿದ್ದ ಸರಳ್ ಎನ್‌ಐಟಿಯಲ್ಲಿ ಬಿಟೆಕ್ ಪದವೀಧರನಾಗಿದ್ದು, ಯುಪಿಎಸ್‌ಸಿ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

Maithri S

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

3 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

6 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

20 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

22 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

43 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

56 mins ago