News Karnataka Kannada
Monday, April 29 2024
ದೇಶ

7 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ವಶಕ್ಕೆ

Drugs worth over Rs 7 crore seized
Photo Credit : News Kannada

ನವದೆಹಲಿ: ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ 47 ಕೋಟಿ ರೂ.ಗೂ ಅಧಿಕ ಮೌಲ್ಯದ 47 ಕಿಲೋಗ್ರಾಂಗಳಷ್ಟು ಮೆಥಾಂಫೆಟಮೈನ್ ಮಾತ್ರೆಗಳನ್ನು (4.70 ಲಕ್ಷ ಮಾತ್ರೆಗಳು) ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವುದಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶನಿವಾರ ತಿಳಿಸಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಕ್ರಮ ಮಾತ್ರೆ ಸಾಗಾಟ ಪತ್ತೆಹಚ್ಚಲು 10 ರಿಂದ 13 ದಿನಗಳ ಕಾಲ ಕಣ್ಗಾವಲು ಇರಿಸಲಾಗಿತ್ತು. ಸೆಪ್ಟೆಂಬರ್ 7 ರಂದು, DRI ತಂಡವು ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಾಗ ಪೆಟ್ಟಿಗೆಗಳಲ್ಲಿ ದೊಡ್ಡ ಪ್ರಮಾಣದ ಮಾತ್ರೆ ಸಾಗಿಸುತ್ತಿರುವುದು ದೃಢಪಟ್ಟಿದೆ.

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯ ನಿಬಂಧನೆಗಳ ಪ್ರಕಾರ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಿಬ್ಬರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು