Categories: ದೇಶ

ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಿದೇಶಾಂಗ ಸಚಿವ ಎಸ್​ ಜೈಶಂಕರ್

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಗುಜರಾತ್​ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಗುಜರಾತ್​ನ ಇನ್ನೂ ಇಬ್ಬರು ರಾಜ್ಯಸಭಾ ಸದಸ್ಯರ ಅವಧಿ ಆಗಸ್ಟ್ 18ಕ್ಕೆ ಕೊನೆಗೊಳ್ಳಲಿದೆ.

ಈ ಸಂಬಂಧ, ಎಸ್ ಜೈಶಂಕರ್ ಅವರು ಭಾನುವಾರ ಅಹಮದಾಬಾದ್ ವಿಮಾನ ನಿಲ್ದಾಣವನ್ನು ತಲುಪಿದರು, ಅಲ್ಲಿ ಅವರನ್ನು ಗುಜರಾತ್ ಸಚಿವ ರಾಘವ್​ ಪಟೇಲ್ ಮತ್ತು ಅಹಮದಾಬಾದ್ ಮೇಯರ್ ಕಿರಿತ್ ಪರ್ಮಾರ್ ಸೇರಿದಂತೆ ಹಲವು ಬಿಜೆಪಿ ಅಧಿಕಾರಿಗಳು ಬರಮಾಡಿಕೊಂಡರು.

ಗುಜರಾತ್‌ನಲ್ಲಿ ಬಿಜೆಪಿ ಹೊಂದಿರುವ ಎಂಟು ಸ್ಥಾನಗಳ ಪೈಕಿ ಎಸ್ ಜೈಶಂಕರ್, ಜುಗಲ್ಜಿ ಠಾಕೂರ್ ಮತ್ತು ದಿನೇಶ್ ಅನವಾಡಿಯಾ ಅವರ ಅಧಿಕಾರಾವಧಿಯು ಆಗಸ್ಟ್ 18 ರಂದು ಕೊನೆಗೊಳ್ಳಲಿದೆ. ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಜುಲೈ 17 ಕೊನೆಯ ದಿನವಾಗಿದೆ. ಅಗತ್ಯ ಬಿದ್ದರೆ ಜುಲೈ 24ರಂದು ಮತದಾನ ನಡೆಯಲಿದೆ.

 

Ashitha S

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

17 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

18 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

39 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

50 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

52 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago