News Karnataka Kannada
Wednesday, May 08 2024
ದೇಶ

ನೇಪಾಳದಲ್ಲಿ ತಡರಾತ್ರಿ 4.3 ತೀವ್ರತೆಯ ಲಘು ಭೂಕಂಪ

ನೇಪಾಳದಲ್ಲಿ 4.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ, ಭಾನುವಾರ ರಾತ್ರಿಯೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ಮಾಹಿತಿ ನೀಡಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.
Photo Credit : News Kannada

ನೇಪಾಳ: ನೇಪಾಳದಲ್ಲಿ 4.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ, ಭಾನುವಾರ ರಾತ್ರಿಯೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ಮಾಹಿತಿ ನೀಡಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಜನರು ಭಯಭೀತರಾದರು. ಹೊಸ ವರ್ಷ ಆಚರಿಸಲು ಜನರು ಅನೇಕ ಸ್ಥಳಗಳಲ್ಲಿ ಜಮಾಯಿಸಿದ್ದರು.

ಇದಕ್ಕೂ ಮುನ್ನ ನವೆಂಬರ್​ನಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪ ಭಾರಿ ಹಾನಿಯನ್ನುಂಟು ಮಾಡಿತ್ತು. ನವೆಂಬರ್ 3 ರಂದು ಪಶ್ಚಿಮ ನೇಪಾಳದ ಜಜರ್ಕೋಟ್​ ಹಾಗೂ ರುಕುಮ್ ಪಶ್ಚಿಮ ಜಿಲ್ಲೆಗಳಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಇದರಿಂದ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು. ಅನೇಕ ಮಂದಿ ಗಾಯಗೊಂಡಿದ್ದರು. ಮೂರು ದಿನಗಳ ನಂತರ ಅಂದರೆ ನವೆಂಬರ್ 6 ರಂದು ಮತ್ತೆ ಭೂಕಂಪ ಸಂಭವಿಸಿತ್ತು. ನವೆಂಬರ್ 23 ರಂದು ನೇಪಾಳದ ಕಠ್ಮಂಡುವಿನಲ್ಲಿ ಭೂಕಂಪ ಸಂಭವಿಸಿತ್ತು, ಅದರ ತೀವ್ರತೆ 4.6ರಷ್ಟಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು