News Karnataka Kannada
Friday, May 10 2024
ದೇಶ

ಚುನಾವಣೆ: ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪಿಎಂ ಮೋದಿ ಶುಭಾಶಯ

Prm
Photo Credit : News Kannada

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

ಜತೆಗೆ 90 ಸದಸ್ಯ ಬಲದ ಛತ್ತೀಸಗಢ ವಿಧಾನಸಭೆಯ 70 ಸ್ಥಾನಗಳಿಗೆ ನಡೆಯುತ್ತಿರುವ 2ನೇ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ‌ಮತದಾರರು ಆಗಮಿಸಿ ತಮ್ಮ ಹಕ್ಕು ಚಲಾಯಿಸುವಂತೆ ಅವರು ಮನವಿ ಮಾಡಿದ್ದಾರೆ.

‘ಪ್ರಜಾಪ್ರಭುತ್ವದ ಈ ಮಹತ್ವದ ಹಬ್ಬವನ್ನು ಆಚರಿಸಲು ರಾಜ್ಯದ ಪ್ರತಿಯೊಂದು ಪ್ರದೇಶದಿಂದ (ಮಧ್ಯಪ್ರದೇಶ) ಮತದಾರರು ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಾರೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ರಾಜ್ಯದ ಎಲ್ಲಾ ಯುವ ಮತದಾರರಿಗೆ ನನ್ನ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇಂದು ಛತ್ತೀಸಗಢ ವಿಧಾನಸಭೆಗೆ ಎರಡನೇ ಮತ್ತು ಕೊನೆಯ ಸುತ್ತಿನ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ನಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಎತ್ತಿಹಿಡಿಯಲು ನಿಮ್ಮ ಪ್ರತಿಯೊಂದು ಮತವೂ ಅಮೂಲ್ಯ’ ಎಂದು ಪ್ರಧಾನಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು