News Karnataka Kannada
Friday, May 17 2024
ದೇಶ

ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದು ತೀರ್ಪು ಕೊಟ್ಟ ಸುಪ್ರೀಂಕೋರ್ಟ್​

ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ
Photo Credit :

ದೆಹಲಿ: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ. ಮುಖ್ಯ ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಪ್ರಕರಣದ ಕುರಿತು ಸರ್ವಾನುಮತದ ತೀರ್ಪು ನೀಡಿದೆ.

ಆದರೆ, ಪೀಠದಲ್ಲಿ ಎರಡು ಭಿನ್ನ ಅಭಿಪ್ರಾಯಗಳಿದ್ದವು. ಭಾರತದ ಮುಖ್ಯ ನ್ಯಾ. ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು