Categories: ದೇಶ

ಪುಲ್ವಾಮಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಫ್ರಾಸಿಪೊರಾ ದಲ್ಲಿ ಇಂದು (ಏಪ್ರಿಲ್‌ 11) ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯ ಮುರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ ವೇಳೆ ಈ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿ ನಡೆದ ನಂತರ ಅರೆಸೈನಿಕ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ ವಾರವೂ ಎನ್‌ಕೌಂಟರ್‌ ನಡೆದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ವೇಲೆ ಓರ್ವ ಭಯೋತ್ಪಾದಕನನ್ನು ಕೊಂದಿದ್ದರು. ಬಳಿಕ ಭಾರತೀಯ ಸೇನಾ ಪಡೆಗಳು ಭಯೋತ್ಪಾದಕರ ಗುಂಪನ್ನು ಹಿಮ್ಮೆಟ್ಟಿಸಿದ್ದವು.

Ashitha S

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

6 seconds ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

33 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

58 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago