ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ನಡೆದ ಗುಂಡಿನ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಹೇಳಿಕೊಂಡಿದ್ದಾರೆ. ಲಾರೆನ್ಸ್ ಸಹೋದರ ಅನ್ಮೋಲ್ ಈಗ ಅಮೆರಿಕದಲ್ಲಿದ್ದಾರೆ. ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಅಲ್ಲದೆ ಸಲ್ಮಾನ್ ಅವರಿಗೆ ನಿಮಗೆ ಟ್ರೇಲರ್ ತೋರಿಸುವುದಕ್ಕಾಗಿಯೇ ನಾವು ಈ ದಾಳಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆ ಎಂದು ಹೇಳಿದ್ದಾಗಿ ವರದಿಯಾಗಿದೆ. ಬಾಂದ್ರಾದಲ್ಲಿರುವ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ಇಬ್ಬರು ಬೈಕ್ ಸವಾರರು 4 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು.
ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅನ್ಮೋಲ್ ಬಿಷ್ಣೋಯ್ ಹೆಸರಿನಲ್ಲಿ ಮಾಡಿರುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲೂ ಆತನ ಕೈವಾಡವಿತ್ತು ಎನ್ನಲಾಗಿದೆ. ಇದು ಎಚ್ಚರಿಕೆ ಮುಂದಿನ ಬಾರಿ ಗಾಳಿಯಲ್ಲಿ ಅಥವಾ ಮನೆ ಮೇಲೆ ಗುಂಡು ಹಾರಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.