Categories: ದೇಶ

ರಾಮ ಮಂದಿರದ ‘ಆಮಂತ್ರಣ ಪತ್ರಿಕೆ’ಯ ಫಸ್ಟ್ ಲುಕ್ ವೈರಲ್; ಹೇಗಿದೆ ನೋಡಿ

ಯೋಧ್ಯೆ : ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಮೂಲಕ ನನಸಾಗಲಿದ್ದು ಭಾವನಾತ್ಮಕ, ಐತಿಹಾಸಿಕ ಕ್ಷಣವನ್ನು ಮನೆ ಮನೆಗಳಲ್ಲಿ ಆಚರಿಸಲು ಜನವರಿ 22 ರಂದು ಎಲ್ಲರೂ ಸಿದ್ದರಾಗುತ್ತಿದ್ದಾರೆ.

ಇನ್ನು ಜ.22 ರಂದು ಅತ್ಯಂತ ಉತ್ಸಾಹದಿಂದ ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ಟ್ರಸ್ಟ್ ಆಮಂತ್ರಣ ಪತ್ರಗಳನ್ನು ಕಳುಹಿಸಲು ಪ್ರಾರಂಭಿಸಿದೆ. ಜನವರಿ 16 ರಿಂದ ಒಂದು ವಾರದ ಆಚರಣೆ ಪ್ರಾರಂಭವಾಗಲಿದ್ದು, ಅದಕ್ಕಾಗಿ ಜನರಿಗೆ ಆಹ್ವಾನಗಳನ್ನು ಕಳುಹಿಸಲಾಗುತ್ತಿದೆ.

ಆದರೆ, ಈ ಒಂದು ವಾರದಲ್ಲಿ ಯಾತ್ರಾ ನಗರದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ಸಂಭವವಿದ್ದು, ಆಹ್ವಾನವಿಲ್ಲದವರು ನಗರಕ್ಕೆ ಪ್ರಯಾಣಿಸುವುದನ್ನ ತಪ್ಪಿಸುವಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ಇತ್ತ ಡಿವೈನ್‌ ಇಂಡಿಯಾ ತನ್ನ ಎಕ್ಸ್‌ ಖಾತೆಯಲ್ಲಿ ಸುಂದರವಾದ ಅಯೋಧ್ಯೆ ರಾಮ ಮಂದಿರದ ‘ಆಮಂತ್ರಣ ಪತ್ರಿಕೆಯ ಮೊದಲ ನೋಟವನ್ನು ಹಂಚಿಕೊಂಡಿದೆ. ಇದು ಜಾಲತಾಣದಲ್ಲಿ ಸಕತ್‌ ವೈರಲ್‌ ಆಗುತ್ತಿದೆ.

 

Ashitha S

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

6 seconds ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

11 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

15 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

49 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago