ಉತ್ತರ ಪ್ರದೇಶ: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಹಸನ್ಪುರ ತಹಸಿಲ್ನ ಹಥಿಯಾಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗು ಬೆಡ್ ನಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್ ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆದರೆ ವೈದ್ಯರು ಅವಳು ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮೃತ ಬಾಲಕಿಯನ್ನು ಮಹೇಶ್ ಖರಗ್ವಂಶಿ ಅವರ ಪುತ್ರಿ ಕಾಮಿನಿ ಎಂದು ಗುರುತಿಸಲಾಗಿದೆ.