ಅಮರಾವತಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಸ್ಕಿಲ್ ಹಗರಣದ ಎ1 ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಸ್ಕಿಲ್ ಡೆವಲಪ್ಮೆಂಟ್ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.