ಜಮ್ಮು-ಕಾಶ್ಮೀರ: ಲಷ್ಕರ್-ಇ-ತೈಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಭದ್ರತಾ ಸಿಬ್ಬಂದಿ ಬಂಧಿಸಿದೆ. ಗುಲಾಮ್ ಹಸನ್, ಮುಖ್ತರ್ ಅಹ್ಮದ್ ಖಾನ್ ಬಂಧಿತ ಉಗ್ರರು. ಜಮ್ಮು-ಕಾಶ್ಮೀರದ ಬಾರಮುಲ್ಲಾದಲ್ಲಿ ಉಗ್ರರನ್ನು ಬಂಧಿಸಿ, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ನರಧಿರಿ ದಂಗೆರ್ಪೊರಾದಲ್ಲಿರುವ ಚೆಕ್ಪಾಯಿಂಟ್ನಲ್ಲಿ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುತ್ತಿದ್ದರು. ಭದ್ರತಾ ಸಿಬ್ಬಂದಿ ಅವರ ಬಳಿ ಹೋಗುತ್ತಿದ್ದಂತೆಯೇ ಓಡಿ ಹೋಗಲು ಪ್ರಯತ್ನಿಸಿದ್ದರು. ನಂತರ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಬೆನ್ನಲ್ಲೇ ನಾಲ್ವರು ಲಾಕ್ ಆಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.