ದೇಶ

ಶುಭ್​ಮನ್ ಗಿಲ್ ಹೆಗಲಿಗೆ ಹೊಸ ಜವಬ್ದಾರಿ ವಹಿಸಿದ ಚುನಾವಣಾ ಆಯೋಗ

ದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್​ಗೆ ರಾಜ್ಯ ಚುನಾವಣಾ ಆಯೋಗ ದೊಡ್ಡ ಜವಾಬ್ದಾರಿಯನ್ನು ವಹಿಸಿದ್ದು, ಯುವ ಆರಂಭಿಕ ಆಟಗಾರನನ್ನು ಪಂಜಾಬ್‌ನ ರಾಜ್ಯ ಚುನಾವಣಾ ಐಕಾನ್ ಆಗಿ ಆಯ್ಕೆ ಮಾಡಿದೆ.

ಇದೀಗ ಹೊಸ ಜವಬ್ದಾರಿಯನ್ನು ವಹಿಸಿಕೊಂಡಿರುವ ಶುಭ್​ಮನ್ ಗಿಲ್, ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಿದ್ದಾರೆ. ಸ್ವತಃ ಈ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಸಿಬಿನ್ ಸಿ. ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯ ಚುನಾವಣಾಧಿಕಾರಿ, ಕ್ರಿಕೆಟಿಗ ಶುಭ್​ಮನ್​ ಗಿಲ್​ಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಅದರಂತೆ ಗಿಲ್ ಪ್ರತ್ಯೇಕವಾಗಿ ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಲಿದ್ದಾರೆ. ರಾಜ್ಯದಲ್ಲಿ ಮತದಾನದ ಪ್ರಮಾಣ ಶೇ 70ರ ಗಡಿ ದಾಟುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶೇಕಡಾ 65.96 ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾನವನ್ನು ಶೇ.70ರಷ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ. ‘ಈ ಬಾರಿ 70 ದಾಟಬೇಕು’ ಎಂಬ ಘೋಷವಾಕ್ಯದೊಂದಿಗೆ ಆಯೋಗ ಚುನಾವಣಾ ಪ್ರಚಾರ ನಡೆಸುತ್ತಿದೆ.

ಕಳೆದ ಶುಕ್ರವಾರ ನಡೆದ ಪಂಜಾಬ್‌ನ ಎಲ್ಲಾ ಡೆಪ್ಯುಟಿ ಕಮಿಷನರ್‌ಗಳೊಂದಿಗಿನ ಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಕಡಿಮೆ ಇರುವ ಪ್ರದೇಶಗಳನ್ನು ಗುರುತಿಸಲು ಹೇಳಲಾಗಿತ್ತು. ಅದರಂತೆ ಇದೀಗ ಗುರುತಿಸಿರುವ ಸ್ಥಳಗಳಲ್ಲಿ ಗಿಲ್ ಚುನಾವಣೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

Ashitha S

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

15 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

38 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

54 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago