ಪಣಜಿ: ಗೋವಾದಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪದ ಮೇಲೆ ಕರ್ನಾಟಕ ಮೂಲದ ಹುಸೇನ್ ಖಾನ್ (40) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಮೇ 6 ರಂದು ದಕ್ಷಿಣ ಗೋವಾದ ಸಾನ್ವೊರ್ದಿಮ್ ಗ್ರಾಮದ ಬಳಿ ನಿರ್ಜನ ಪ್ರದೇಶವೊಂದರಲ್ಲಿ ರೂಪಾ ಪಾರ್ಕರ್ ಎನ್ನುವ ಮಹಿಳೆಯ ಕೊಲೆ ನಡೆದಿತ್ತು.
ವೃತ್ತಿಯಲ್ಲಿ ಕ್ಯಾಬ್ ಚಾಲಕನಾದ ಹುಸೇನ್ ಖಾನ್ ಅವರು ಬಸ್ಗೆ ಕಾಯುತ್ತಿದ್ದ ರೂಪಾ ಪಾರ್ಕರ್ ಅವರಿಗೆ ಡ್ರಾಪ್ ನೀಡುವ ನೆಪದಲ್ಲಿ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ. ಬಳಿಕ ಅವರ ಬಳಿ ಇದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದ.
ಹುಸೇನ್ ಖಾನ್ ಚಿನ್ನಾಭರಣಗಳನ್ನು ಮಾರಾಟ ಮಾಡಿ ಸಾಲ ತೀರಿಸಿದ್ದ. ದ್ವಿಚಕ್ರ ವಾಹನವನ್ನೂ ಖರೀದಿಸಿದ್ದ ಎಂದು ದಕ್ಷಿಣ ಗೋವಾ ಎಸ್ಪಿ ಅಭಿಷೇಕ್ ದಾನಿಯಾ ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…