ನವದೆಹಲಿ: ಮುಂದಿನ ವರ್ಷ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.
‘ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಈ ಕುರಿತು ನಿರ್ದೇಶನ ನೀಡಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ‘ ಎಂದು ಕಾಂಗ್ರೆಸ್ನ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಚುನಾವಣಾ ವೀಕ್ಷಕ ಪಿ.ಚಿದಂಬರಂ, ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.