Categories: ಗೋವಾ

ಗೋವಾ: ಸನ್‍ಬರ್ನ್ ಫೆಸ್ಟಿವಲ್ ಗೆ ಅವಕಾಶವಿಲ್ಲ

ಪಣಜಿ: ಗೋವಾ ಸರಕಾರವು ತನ್ನ ಸ್ವಂತ ಮ್ಯೂಸಿಕ್ ಫೆಸ್ಟಿವಲ್‍ನ್ನು ಡಿಸೆಂಬರ್ 26 ರಿಂದ 31 ರ ವರೆಗೆ ಆಯೋಜಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ಗೋವಾದಲ್ಲಿ ಸನ್‍ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿರುವುದಿಲ್ಲ ಎಂದು ಗೋವಾ ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ ಹೇಳಿದ್ದಾರೆ.

ಪ್ರತಿ ವರ್ಷ ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷಕ್ಕೆ ಸ್ವಾಗತ ಕೋರಲು ರಾಜ್ಯದ ವಿವಿಧೆಡೆ ಸಂಗೀತೋತ್ಸವಗಳನ್ನು ಆಯೋಜಿಸಲಾಗಿದೆ. ಈ ಹಿಂದೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ಸನ್‍ಬರ್ನ ಫೆಸ್ಟಿವಲ್‍ನ್ನು ಗೋವಾದಲ್ಲಿ ಮತ್ತೆ ಆಯೋಜಿಸುವ ಉದ್ದೇಶದಿಂದ ಸಂಸ್ಥೆ ಟಿಕೆಟ್ ಮಾರಾಟ ಆರಂಭಿಸಿದೆ.

ಈ ಕುರಿತಂತೆ ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ರೋಹನ್ ಖಂವಟೆ, ಗೋವಾದಲ್ಲಿ ಸನ್ ಬರ್ನ್ ಫೆಸ್ಟಿವಲ್ ಆಯೋಜಿಸಲು ಇದುವರೆಗೂ ಯಾರೂ ಕೂಡ ಸನ್‍ಬರ್ನ್ ಆಯೋಜಕರು ಪರವಾನಗಿ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಗೋವಾ ರಾಜ್ಯ ಸರ್ಕಾರವು ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಮೂಜಿಕ್ ಫೆಸ್ಟಿವಲ್ ಆಯೋಜಿಸಲು ನಾವು ವಿಚಾರ ನಡೆಸುತ್ತಿದ್ದೇವೆ. ಸರ್ಕಾರದ ವತಿಯಿಂದ ಮ್ಯೂಜಿಕ್ ಫೆಸ್ಟಿವಲ್ ಆಯೋಜಿಸಿದರೆ ಸನ್‍ಬರ್ನ್ ಫೆಸ್ಟಿವಲ್ ಆಯೋಜನೆಗೆ ಸ್ಥಳಾವಕಾಶವಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ವತಿಯಿಂದ ಹೊಸ ವರ್ಷ ಸಂಭ್ರಮಾಚರಣೆಯ ಸಂದರ್ಭದಲ್ಲಿ ಮ್ಯೂಜಿಕ್ ಫೆಸ್ಟಿವಲ್ ಆಯೋಜನೆಯಾದರೆ ಸನ್ ಬರ್ನ್
ನಂತಹ ಸಂಸ್ಥೆಗೆ ರಾಜ್ಯದಲ್ಲಿ ಮ್ಯೂಜಿಕ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿರುವುದಿಲ್ಲ. ಗೋವಾದಲ್ಲಿ ಯಾರೇ ಇಂತಹ ಫೆಸ್ಟಿವಲ್ ಆಯೋಜಿಸಲು ಬಯಸಿದರೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪೂರ್ವಾನುಮತಿ ಅಗತ್ಯವಾಗಿರುತ್ತದೆ ಎಂದು ಸಚಿವ ರೋಹನ್ ಖಂವಟೆ ಹೇಳಿದರು.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

22 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

35 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

50 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago