ಪಣಜಿ: ಬ್ರಿಟನ್ನಿಂದ ಮುಂಜಾನೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಗೆ ಕೋವಿಡ್-19 ದೃಢಪಟ್ಟಿದೆ. ಇವರೆಲ್ಲರಿಂದ ಸಂಗ್ರಹಿಸಿರುವ ಮಾದರಿಯನ್ನು ವಿಶ್ಲೇಷಣೆಗೆ ಜೀನೋಮ್ ಸೀಕ್ವೆನ್ಸಿಂಗ್ ಕಳುಹಿಸಲಾಗಿದೆ ಎಂದು ಗೋವಾದ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಈ ಕುರಿತು ಆರೋಗ್ಯ ಸಚಿವರಾದ ವಿಶ್ವಜಿತ್ ರಾಣೆ ಟ್ವೀಟ್ ಮಾಡಿದ್ದು, ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಈ ಮೂವರು ಪ್ರಯಾಣಿಕರು ಸರ್ಕಾರದ 101ನೇ ವಂದೇ ಭಾರತ್ ಮಿಷನ್ ಅಡಿಯಲ್ಲಿ ಲಂಡನ್ನ ಹೀಥ್ರೂ ವಿಮಾನ ನಿಲ್ದಾಣದಿಂದ ರಾಜ್ಯಕ್ಕೆ ಬಂದಿದ್ದರು ಎಂದು ಗೋವಾ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ವಿಮಾನದಲ್ಲಿ ಒಟ್ಟಾರೆ ಎಷ್ಟು ಪ್ರಯಾಣಿಕರಿದ್ದರು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.