ಪಣಜಿ: ಪ್ರಮೋದ್ ಸಾವಂತ್ ಅವರು ಗೋವಾದ ಮುಖ್ಯಮಂತ್ರಿಯಾಗಿ ಮಾರ್ಚ್ 28 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್ , ಮಾರ್ಚ್ 28 ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ಆಡಳಿತವಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.