Categories: ಗೋವಾ

ರಾಜಕೀಯ ಪ್ರವಾಸೋದ್ಯಮ’ದ ಭಾಗವಾಗಿ ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿ ಅವರು ಗೋವಾಕ್ಕೆ ಭೇಟಿ : ತೇಜಸ್ವಿ ಸೂರ್ಯ

ಪಣಜಿ: ‘ರಾಜಕೀಯ ಪ್ರವಾಸೋದ್ಯಮ’ದ ಭಾಗವಾಗಿ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಗೋವಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಹಾಗೂ ಪಕ್ಷದ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ಪ್ರವಾಸೋದ್ಯಮ ಕೇಂದ್ರವಾದ ಥೈಲ್ಯಾಂಡ್ ಅನ್ನು ಬಂದ್ ಮಾಡಲಾಗಿರುವುದರಿಂದ ರಾಹುಲ್ ಗಾಂಧಿ ಗೋವಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ.

ಇಂದು ಪಣಜಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೂರ್ಯ, ಟಿಎಂಸಿ ಮತ್ತು ಆಮ್ ಆದ್ಮಿ ಪಕ್ಷಗಳು ಗೋವಾ ಪ್ರವೇಶಿಸಿದ್ದರೂ, ಆಡಳಿತಾರೂಢ ಬಿಜೆಪಿಯು “ಪ್ರಯತ್ನಿಸಿದ ಮತ್ತು ಪರೀಕ್ಷಿಸಿದ ರಾಜಕೀಯ ಮಾದರಿ” ಏನು ಅಂತ ಜನರಿಗೆ ತಿಳಿದಿದೆ ಎಂದಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಇಬ್ಬರೂ ರಾಜಕೀಯ ಪ್ರವಾಸಕ್ಕಾಗಿ ಗೋವಾದಲ್ಲಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಥಾಯ್ಲೆಂಡ್ ಪ್ರವಾಸಿಗರಿಗೆ ಅವಕಾಶ ನೀಡುತ್ತಿಲ್ಲ. ಕೋವಿಡ್ ಕಾರಣದಿಂದಾಗಿ ರಾಹುಲ್ ಗಾಂಧಿಯವರ ಕಷ್ಟವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅದೇ ರೀತಿ, ರಾಜಕೀಯ ಪ್ರವಾಸಕ್ಕಾಗಿ ಎಎಪಿ ಕೂಡ ಇಲ್ಲಿದೆ” ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

“ಜನರು ಎರಡು ಬಾರಿ (2012 ಮತ್ತು 2017) ಬಿಜೆಪಿಯಲ್ಲಿ ತಮ್ಮ ವಿಶ್ವಾಸವನ್ನು ಮರುಕಳಿಸಿದ್ದಾರೆ. ಈ ಯಾವುದೇ ರಾಜಕೀಯ ಪ್ರವಾಸಿಗರಿಂದ ಗೋವಾದಲ್ಲಿ ಬಿಜೆಪಿಯ ಜನಪ್ರಿಯತೆಯನ್ನು ಕುಗ್ಗಿಸಲು ಸಾಧ್ಯವಾಗುವುದಿಲ್ಲ. ನಮ್ಮ ಪಕ್ಷ ಮೂರನೇ ಅವಧಿಗೆ(2022 ರಲ್ಲಿ) ಅಧಿಕಾರಕ್ಕೆ ಬರಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Sneha Gowda

Recent Posts

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

14 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

41 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

56 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

1 hour ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

2 hours ago