News Karnataka Kannada
Thursday, May 02 2024
ಗೋವಾ

ವಿಮೋಚನಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಗೋವಾ ಭೇಟಿ ಬಹುತೇಕ ಖಚಿತ

Modi Delhi 7 7 21
Photo Credit :

ಪಣಜಿ: ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನದ 60 ನೇಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಆಮಂತ್ರಿಸಿದೆ. ಗೋವಾದ 60 ನೇಯ ವಿಮೋಚನಾ ದಿನ ಡಿ.19 ರಂದು ಪ್ರಧಾನಿ ನರೇಂದ್ರ ಮೋದಿ ಗೋವಾ ಭೇಟಿ ಬಹುತೇಕ ಖಚಿತವಾಗಿದೆ.

ಪ್ರಧಾನಿ ಅವರ ಗೋವಾ ಭೇಟಿಯ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸುವ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಒಂದು ದಿನದ ಗೋವಾ ಭೇಟಿಯ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪಣಜಿಯಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿದ್ದಾರೆ.

ಅವರ ಸಮ್ಮುಖದಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳ ಕುರಿತು ಸರ್ಕಾರಿ ಅಧಿಕಾರಿಗಳೊಂದಿಗೆ ಸಿಎಂ ಸಾವಂತ್ ಸಭೆ ನಡೆಸಿದ್ದಾರೆ. ಪ್ರಧಾನಿ ಮೋದಿಯವರು ಗೋವಾ ವೈದ್ಯಕೀಯ ಕಾಲೇಜಿನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮತ್ತು ಆಗ್ವಾದ್ ಕೋಟೆಯ ನವೀಕರಣ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಪಣಜಿಯ ಆಜಾದ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು