Categories: ಗೋವಾ

ಗೋವಾ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಪಣಜಿ: ಗೋವಾ ರಾಜ್ಯದಲ್ಲಿ ಇತ್ತೀಚೆಗೆ ಜಲಪಾತದಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ನಿಟ್ಟಿನಲ್ಲಿ ಗೋವಾ ಸರಕಾರ ರಾಜ್ಯದ ಎಲ್ಲಾ ವನ್ಯಜೀವಿ ಅಭಯಾರಣ್ಯ ಮತ್ತು ಜಲಪಾತಗಳಿಗೆ ಜನರ ಪ್ರವೇಶವನ್ನು ನಿಷೇಧಿಸಿದೆ.

ನೇತ್ರಾವಳಿ, ಸಂಗೂಮ್‌ನ ಮೈನಾಪಿ ಜಲಪಾತದಲ್ಲಿ ಇತ್ತೀಚೆಗೆ ಇಬ್ಬರು ಮುಳುಗಿ ಸಾವನ್ನಪ್ಪಿದ ಘಟನೆ ಬಳಿಕ ಸರಕಾರ ಈ ಕ್ರಮ ಕೈಗೊಂಡಿದೆ.

ಅರಣ್ಯ ಹೆಚ್ಚುವರಿ ಪ್ರಧಾನ ಸಂರಕ್ಷಣಾಧಿಕಾರಿ ಉಮಾಕಾಂತ್ ಮಂಗಳವಾರ ಪ್ರವೇಶ ನಿಷೇಧ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಕಾರಣ ಮತ್ತು ಅರಣ್ಯ ಪ್ರದೇಶದಲ್ಲಿನ ನದಿಗಳಲ್ಲಿ ಹೆಚ್ಚಿನ ನೀರಿನ ಹರಿವು ಇರುವುದರಿಂದ ಮುಂದಿನ ಆದೇಶದವರೆಗೆ ಎಲ್ಲಾ ವನ್ಯಜೀವಿ ಅಭಯಾರಣ್ಯಗಳ ಒಳಗೆ ಮತ್ತು ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ವರದಿ ನೀಡುವಂತೆ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವರದಿ ಹೇಳಿದೆ.

Ashika S

Recent Posts

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

2 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

15 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

16 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

29 mins ago

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ…

36 mins ago

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಗಾಡ್ ಪ್ರಾಮಿಸ್’ ಚಿತ್ರದ ಮುಹೂರ್ತ

ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…

59 mins ago