News Karnataka Kannada
Tuesday, April 23 2024
Cricket
ಗುಜರಾತ್

ಗುಜರಾತ್‌:ಒಬ್ಬ ವ್ಯಕ್ತಿಯಲ್ಲಿ ಕೊರೋನವೈರಸ್ ರೂಪಾಂತರ XE ಸೋಂಕು ಪತ್ತೆ!

Corona
Photo Credit :

ಹೊಸದಿಲ್ಲಿ: ಗುಜರಾತ್‌ನಲ್ಲಿ ಒಬ್ಬ ವ್ಯಕ್ತಿಗೆ ಕೊರೋನವೈರಸ್ ರೂಪಾಂತರ XE ಸೋಂಕು ತಗಲಿದೆ ಎಂದು ಅಧಿಕೃತ ಮೂಲಗಳು ಇಂದು ತಿಳಿಸಿವೆ.

ಈ ವಾರದ ಆರಂಭದಲ್ಲಿ ವಿದೇಶಿ ಪ್ರಯಾಣದ ಇತಿಹಾಸ ಹೊಂದಿರುವ ರೋಗಿಯು XE ರೂಪಾಂತರದ ಸಂಪರ್ಕಕ್ಕೆ ಬಂದಿದ್ದಾರೆ ಎಂದು ವರದಿಯಾಗಿತ್ತು. ಆದರೆ ಆರೋಗ್ಯ ಸಚಿವಾಲಯವು ವರದಿಯನ್ನು ನಿರಾಕರಿಸಿತ್ತು. “ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ” ಎಂದು ಅದು ಹೇಳಿತ್ತು.

ರಾಜ್ಯದಲ್ಲಿ XM ರೂಪಾಂತರದ ಒಂದು ಪ್ರಕರಣವೂ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿದ್ದು, ಇಬ್ಬರು ರೋಗಿಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ.

“ಮುಂಬೈನಲ್ಲಿ ಕೊರೊನಾವೈರಸ್‌ನ XE ರೂಪಾಂತರದ ಪತ್ತೆಯ ವರದಿಯ ಗಂಟೆಗಳ ನಂತರ ಕೇಂದ್ರ ಆರೋಗ್ಯ ಸಚಿವಾಲಯವು ಪ್ರಸ್ತುತ ಪುರಾವೆಗಳು ಹೊಸ ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ ಎಂದು ಹೇಳಿದೆ” ಎಂದು ಪಿಐಬಿ ಮಹಾರಾಷ್ಟ್ರ ಗುರುವಾರ ಟ್ವೀಟ್‌ನಲ್ಲಿ ತಿಳಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು