News Karnataka Kannada
Monday, April 22 2024
Cricket
ಗುಜರಾತ್

ಜಾಮೀನು ಸಿಕ್ಕ ಕೆಲಹೊತ್ತಲ್ಲೇ ಮತ್ತೆ ಶಾಸಕ ಜಿಗ್ನೇಶ್ ಮೇವಾನಿ ಬಂಧನ

Gujarath
Photo Credit :

ಪ್ರಧಾನಿಮೋದಿ ಅವರ ವಿರುದ್ಧ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಇಂದು ಜಾಮೀನು ಸಿಕ್ಕಿದ್ದು, ಆದರೆ, ಇದರ ಬೆನ್ನಲ್ಲೇ ಅಸ್ಸಾಂ ಪೊಲೀಸರು ಮತ್ತೊಂದು ಹೊಸ ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದಾರೆ.

ಮೋದಿ ವಿರುದ್ಧ ಸರಣಿ ಟ್ವೀಟ್​ ಮಾಡಿರುವುದಕ್ಕೆ ಸಂಬಂಧಿಸಿದಂತೆ ಗುಜರಾತ್​ನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಅಸ್ಸಾಂನಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಅವರನ್ನ ಕಳೆದ ಬುಧವಾರ ತಡರಾತ್ರಿ ಅಸ್ಸಾಂ ಸ್ಸೋಂ ಪೊಲೀಸರು ಬಂಧಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರಿಗೆ ಜಾಮೀನು ಮಂಜೂರುಗೊಂಡಿತ್ತು. ಇದರ ಬೆನ್ನಲ್ಲೇ ಬರ್ಪೆಟಾ ಜಿಲ್ಲೆಯಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದ್ದು, ಹೀಗಾಗಿ ಅವರನ್ನ ಬಂಧನ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ಹಂಚಿಕೊಂಡ ಮೇವಾನಿ ಟ್ವೀಟ್​ ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಸಂಚು, ಸಮುದಾಯವನ್ನು ಅವಮಾನಿಸುವುದು, ಶಾಂತಿಯ ವಾತಾವರಣ ಕದಡುವಂತಿದೆ ಎಂದು ಆರೋಪಿಸಿದ್ದರು.

ಹೀಗಾಗಿ ಅಸ್ಸಾಂ ಪೊಲೀಸರು ಜಿಗ್ನೇಶ್ ಮೇವಾನಿ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಅವರನ್ನ ಪೊಲೀಸರು ಬಂಧನ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು