News Karnataka Kannada
Tuesday, April 23 2024
Cricket
ಗುಜರಾತ್

ನಕಲಿ ಕಾಲ್ ಸೆಂಟರ್ ಮೇಲೆ ಕೋಲ್ಕತ್ತಾ ಪೊಲೀಸರ ದಾಳಿ

Arrest
Photo Credit :

ಕೋಲ್ಕತ್ತ: ಗಾರ್ಡನ್ ರೀಚ್ ಪ್ರದೇಶದಲ್ಲಿ ನಡೆಯುತ್ತಿದ್ದ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ಮಾಡಿದ ಕೋಲ್ಕತ್ತಾ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ.

ನಕಲಿ ಕಾಲ್ ಸೆಂಟರ್ ಮಾಲೀಕ ಪರಾರಿಯಾಗಿದ್ದಾರೆ. 13 ಲ್ಯಾಪ್‍ಟಾಪ್‍ಗಳು ,ಎಂಟು ಮೊಬೈಲ್ ಫೋನ್‍ಗಳು , ನಾಲ್ಕು ಹಾರ್ಡ್ ಡಿಸ್ಕಗಳು ಮತ್ತು 19 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಬಂತರು ಕಂಪ್ಯೂಟರ್ ಸಿಸ್ಟಮ್‍ಗಳನ್ನು ಸರಿಪಡಿಸುವ ನೆಪದಲ್ಲಿ ಜನರನ್ನು ವಂಚಿಸುವ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದಾರೆಂದು ತೋರುತ್ತಿದೆ. ಬ್ಯಾಂಕ್ ಖಾತೆಯಲ್ಲಿ ಅಕ್ರಮ ವಹಿವಾಟಿನ ಮೂಲಕ ವಂಚಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ

ಖಚಿತ ಸುಳಿವಿನ ಮೇರೆಗೆ ಪೊಲೀಸರು ತಡರಾತ್ರಿ ಗಾರ್ಡನ್ ರೀಚ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿ , ಯಾವುದೇ ಪರವಾನಿಗೆ ಇಲ್ಲದೆ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಲ್ ಸೆಂಟರ್ ಭೇದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು