News Karnataka Kannada
Monday, April 29 2024
ಗುಜರಾತ್

ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದಕ್ಕೆ ಚಪ್ಪಲಿ ಎಸೆದ ಅಪರಾಧಿ

Jail 06092021
Photo Credit :

ಅಹಮದಾಬಾದ್‌ : ಕಳೆದ ಏಪ್ರಿಲ್‌ನಲ್ಲಿ ದಾಖಲಾದ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ನ ನ್ಯಾಯಾಲಯ 27 ವರ್ಷದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದೆ.

ವಿಶೇಷ ಪೋಸ್ಕೋ ಕೋರ್ಟ್‌ ನ್ಯಾಯಮೂರ್ತಿ ಪಿಎಸ್‌ ಕಾಲಾ ಅವರು ಶಿಕ್ಷೆಯನ್ನು ಪ್ರಕಟಿಸುತ್ತಿದ್ದಂತೆ ರೊಚ್ಚಿಗೆದ್ದ ಅಪರಾಧಿ ಸುಜಿತ್‌ ಸಾಕೇತ್‌ ಚಪ್ಪಲಿಯನ್ನು ಎಸೆದಿದ್ದಾರೆ. ಆದರೆ ಚಪ್ಪಲಿ ನ್ಯಾಯಮೂರ್ತಿಗೆ ತಗುಲದೆ ಸಾಕ್ಷಿ ನಿಲ್ಲುವ ಕಟಕಟೆ ಸಮೀಪ ಬಿದ್ದಿದೆ.

ಮಧ್ಯಪ್ರದೇಶದ ವಲಸೆ ಕಾರ್ಮಿಕನಾದ ಸುಜಿತ್‌ ಏಪ್ರಿಲ್‌ 30ರಂದು 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ್ದ. ಬಾಲಕಿ ನೆರೆಮನೆಯ ವಲಸೆ ಕಾರ್ಮಿಕನ ಮಗಳಾಗಿದ್ದಳು. ಬಾಲಕಿ ಒಂಟಿಯಾಗಿದ್ದ ಸಂದರ್ಭ ಚಾಕೋಲೆಟ್‌ ಆಸೆ ತೋರಿಸಿ ಅಪಹರಿಸಿದ್ದ. ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ನಡೆಸಿ, ಆಕೆಯ ಸಾವಿಗೆ ಕಾರಣನಾಗಿದ್ದ.

ಹಜಿರಾ ಪೊಲೀಸ್‌ ಠಾಣೆಯಲ್ಲಿ ಆರೋಪಿ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 26 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿದೆ. 53 ಸಮರ್ಪಕ ಸಾಕ್ಷಿಗಳನ್ನು ಪರಿಗಣಿಸಿ ಸುಜಿತ್‌ ಅಪರಾಧಿ ಎಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು