Categories: ಗುಜರಾತ್

ಆಫ್ರಿಕಾದಿಂದ ಗುಜರಾತ್‌ಗೆ ಹಿಂದಿರುಗಿದ ದಂಪತಿಗೆ ಓಮೈಕ್ರಾನ್ ದೃಢ

ಅಹಮದಾಬಾದ್: ದಕ್ಷಿಣ ಆಫ್ರಿಕಾದ ಜಾಂಬಿಯಾದಿಂದ ಹಿಂದಿರುಗಿದ ಗುಜರಾತ್‌ನ ವಡೋದರಾ ನಗರದ ವೃದ್ಧ ದಂಪತಿಗಳಿಗೆ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಫತೇಪುರ ಪ್ರದೇಶದ ನಿವಾಸಿಗಳಾದ 75 ವರ್ಷದ ವ್ಯಕ್ತಿ ಮತ್ತು 67 ವರ್ಷದ ಆತನ ಪತ್ನಿ ಡಿಸೆಂಬರ್ 7ರಂದು ಆಫ್ರಿಕಾದಿಂದ ವಡೋದರಕ್ಕೆ ಹಿಂತಿರುಗಿದ್ದರು. ಅವರಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಸಂಬಂಧಿಕರ ಒತ್ತಾಯದಿಂದಾಗಿ ಇಬ್ಬರೂ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದರು. ಬಳಿಕ ಡಿಸೆಂಬರ್ 12ರಂದು ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿತ್ತು.

ದಂಪತಿಯನ್ನು ಅವರ ಮನೆಯಲ್ಲೇ ಐಸೋಲೇಟ್ ಮಾಡಲಾಗಿತ್ತು ಶುಕ್ರವಾರ ರಾತ್ರಿ ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಇಬ್ಬರೂ ಓಮೈಕ್ರಾನ್ ಸೋಂಕಿಗೆ ಒಳಗಾಗಿದ್ದಾರೆ ಎಂದು ವಿಎಂಸಿಗೆ ಮಾಹಿತಿ ನೀಡಿದೆ ಎಂದು ವೈದ್ಯಕೀಯ ಅಧಿಕಾರಿ ತಿಳಿಸಿದ್ದಾರೆ.

ಈ ಮೂಲಕ ಗುಜರಾತ್‌ನಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವೃದ್ಧ ದಂಪತಿ ಜಾಂಬಿಯಾದಿಂದ ಹಿಂದಿರುಗಿದ್ದರು ಎಂದು ವಡೋದರ ಮುನ್ಸಿಪಲ್ ಕಾರ್ಪೊರೇಷನ್‌ ವೈದ್ಯಕೀಯ ಅಧಿಕಾರಿ ಡಾ ದೇವೇಶ್ ಪಟೇಲ್ ತಿಳಿಸಿದ್ದಾರೆ.

ಕೂಡಲೇ ಅವರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸೂರತ್‌ನ ಉದ್ಯಮಿ ಮತ್ತು ಮೆಹ್ಸಾನಾದ ಆರೋಗ್ಯ ಕಾರ್ಯಕರ್ತೆಗೆ ಓಮೈಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Swathi MG

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

5 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

32 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

45 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

60 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago