ಗುಜರಾತ್

ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆ

ಅಹಮದಾಬಾದ್‌: ಪಂಚರಾಜ್ಯ ಚುನಾವಣೆಗಳ ಬಳಿಕ ಸದ್ಯ ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ.ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಏಪ್ರಿಲ್ 6 ರಂದು ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ.

ಚುನಾವಣೆ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಏಪ್ರಿಲ್ 6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಐತಿಹಾಸಿಕ ಗಾಂಧಿ ಸಂದೇಶ ಯಾತ್ರೆಯನ್ನು ಏಪ್ರಿಲ್ 6 ರಂದು ರಾಹುಲ್ ಗಾಂಧಿ ಅವರು ಸಬರಮತಿ ಆಶ್ರಮದಿಂದ ಆರಂಭಿಸಲಿದ್ದಾರೆ. ಈ ಯಾತ್ರೆಯು ದೆಹಲಿಯ ದಿವಂಗತ ರಾಜೀವ್ ಗಾಂಧಿಯವರ ಸಮಾಧಿ ವೀರ್ ಭೂಮಿಯಲ್ಲಿ ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್‌ನ ಸೇವಾದಳದ ಕಾರ್ಯಕರ್ತರ ನೇತೃತ್ವದ ಯಾತ್ರೆಯು ರಾಜಸ್ಥಾನ, ಹರಿಯಾಣ ಸೇರಿದಂತೆ ಗುಜರಾತ್‌ನ ಪ್ರತಿ ಜಿಲ್ಲೆಗಳಲ್ಲಿ ಹಾದುಹೋಗುತ್ತದೆ ಮತ್ತು ಮಹಾತ್ಮ ಗಾಂಧಿಯವರ ಶಾಂತಿ ಸಂದೇಶಗಳನ್ನು ಎತ್ತಿ ತೋರಿಸುತ್ತದೆ.

ಈ ವೇಳೆ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಪ್ರಯಾಣದ ಕ್ಷಣಗಳನ್ನು ಹೈಲೈಟ್ ಮಾಡಲಾಗುವುದು. ಹಿರಿಯ ಗುಜರಾತ್ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಭಾಸ್ಕರ್ ಅವರೊಂದಿಗೆ ಗಾಂಧಿ ಸಂದೇಶ ಯಾತ್ರೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

1930ರ ಏಪ್ರಿಲ್ 6ರಂದು ಮುಕ್ತಾಯಗೊಂಡ ಭಾರತದ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ದಿನದಂದು ಈ ದಂಡಿ ಯಾತ್ರೆ ನಡೆಯಲಿದೆ. ಈ ದಿನವನ್ನು ಆಚರಿಸಲು ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡುತ್ತಿದ್ದಾರೆ ಮತ್ತು ಏಪ್ರಿಲ್ 6 ರಂದು ಅಹಮದಾಬಾದ್‌ನ ಸಬರಮತಿ ಆಶ್ರಮದಿಂದ ಗಾಂಧಿ ಸಂದೇಶ ಯಾತ್ರೆಯನ್ನು ಪ್ರಾರಂಭಿಸಲಿದ್ದಾರೆ.

 

Swathi MG

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

9 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

26 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

47 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago