Categories: ಗುಜರಾತ್

ಕುಡುಕ ಪತಿಯನ್ನು ಕುತ್ತಿಗೆ ಹಿಸುಕಿ ಕೊಂದ ಪತ್ನಿ

ಗುಜರಾತ್‌ : ಕುಡುಕ ಗಂಡನ ಕಾಟದಿಂದ ರೋಸಿ ಹೋಗಿರುವ ಮಡದಿಯೊಬ್ಬರು ತಮ್ಮ ಪತಿಯನ್ನು ಕುತ್ತಿಗೆ ಹಿಸುಕಿ ಕೊಂದ ಪ್ರಕರಣವೊಂದನ್ನು ಭೇದಿಸಲು ಗುಜರಾತ್‌ನ ಸೂರತ್‌ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೂರತ್ ಮುನ್ಸಿಪಲ್ ಕಾರ್ಪೊರೇಷನ್‌ನ ಕಾರ್ಮಿಕ ಭವೇಶ್ ಸೋಲಂಕಿ ಶವವಾಗಿ ಪತ್ತೆಯಾಗಿದ್ದು, ಆತನ ಪತ್ನಿ ಮೀನಾಕ್ಷಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿಯ ಕುಡಿತದ ಚಟದಿಂದ ಮಹಿಳೆ ಬೇಸತ್ತಿದ್ದಳು ಎನ್ನಲಾಗಿದೆ. ಸೋಲಂಕಿ ಅವರು ಪೌರಕಾರ್ಮಿಕ ಸಂಸ್ಥೆಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಿಂದ ಸೋಲಂಕಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಸೋಲಂಕಿ ದೇಹದಲ್ಲಿ ಕತ್ತು ಹಿಸುಕಿದ ಗುರುತುಗಳು ಕಂಡುಬಂದಿವೆ. ನಗರದ ಲಾಲ್‌ಗೇಟ್‌ ಪೊಲೀಸರು ಈಗ ಮೀನಾಕ್ಷಿಯನ್ನು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಕೊಲೆ ಆರೋಪಪಟ್ಟಿ ಸಿದ್ಧಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಮೀನಾಕ್ಷಿ ತನ್ನ ಪತಿಯನ್ನು ಕೊಂದು, ನಂತರ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

ಸಂತ್ರಸ್ತೆಯು ತನ್ನ ಕುಟುಂಬದೊಂದಿಗೆ ಕಾಜಿಪುರ ಪ್ರದೇಶದ ಚುಮ್ಮಲಿಸ್ ನಿ ಚಾಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಭಾನುವಾರದಂದು ಈ ಮಹಿಳೆ ತನ್ನ ಪತಿ ಹಾಸಿಗೆಯಿಂದ ಬಿದ್ದು ಪ್ರಜ್ಞಾಹೀನನಾಗಿದ್ದಾನೆ ಎಂದು ತನ್ನ ನೆರೆಹೊರೆಯವರಿಗೆ ತಿಳಿಸಿದ್ದಾರೆ. ಆಗ ಸೋಲಂಕಿಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸೋಲಂಕಿ ಅವರ ಸಹೋದರ ಮಹೇಶ್ ಸೋಮವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಮೀನಾಕ್ಷಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿತದ ಚಟವಿದ್ದ ಸೋಲಂಕಿ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿರಲಿಲ್ಲ. ಇದರಿಂದ ದಂಪತಿ ನಡುವೆ ಜಗಳ ನಡೆದಿದೆ. ಸೋಲಂಕಿಯೊಂದಿಗೆ ಜಗಳವಾಡಿದ ನಂತರ ಮೀನಾಕ್ಷಿ ಆತ ಮಲಗಿದ್ದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

27 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

49 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago