ಗುಜರಾತ್: ಮಂಗಳವಾರ ರಾತ್ರಿ ಗುಜರಾತಿನ ಸೂರತ್ ಪ್ರಯಾಣಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ಮಹಿಳೆಯೊಬ್ಬರು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.ಸೂರತ್ ನಗರದ ವರಚ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪ್ರಯಾಣಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿದ್ದು, ವ್ಯಕ್ತಿಯೊಬ್ಬರು ಸುಟ್ಟಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡಾಗ ಬಸ್ನಲ್ಲಿದ್ದ ಸುಮಾರು 15 ಪ್ರಯಾಣಿಕರು ಸಕಾಲದಲ್ಲಿ ಇಳಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬೆಂಕಿ ವಾಹನದಲ್ಲಿ ಬೇಗನೆ ವ್ಯಾಪಿಸಿತು ಎಂದು ಸೂರತ್ನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ಹೇಳಿದ್ದಾರೆ.
ಇಂಜಿನ್ ಪ್ರದೇಶದಲ್ಲಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ. ವಾಹನದ ಎಸಿ ಕಂಪ್ರೆಸರ್ನಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿ ಫೋಮ್ ಮತ್ತು ಇತರ ಸಿಂಥೆಟಿಕ್ ವಸ್ತುಗಳಿಂದಾಗಿ ಬೆಂಕಿಯು ಬೇಗನೆ ಹರಡಿತು ಅಧಿಕಾರಿ ಹೇಳಿದರು.