News Karnataka Kannada
Wednesday, May 01 2024
ಗುಜರಾತ್

ಖಾಸಗಿ ವಿಡಿಯೋ ವೈರಲ್: ಖಿನ್ನತೆಗೆ ಒಳಗಾದ ಬಾಲಕಿ ಆತ್ಮಹತ್ಯೆಗೆ ಶರಣು

Suicide
Photo Credit :

ಅಹಮದಾಬಾದ್ : ಪ್ರೀತಿಸುತ್ತಿದ್ದ ವ್ಯಕ್ತಿಯೇ ತಮ್ಮ ಖಾಸಗಿ ವಿಡಿಯೋವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಕ್ಕಾಗಿ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಅಹಮದಾಬಾದ್ ನ ಚಾರ್ ನಗರ್ ನಲ್ಲಿ ನಡೆದಿದೆ. ಬಾಲಕಿ ಈ ಕಾರ ಣಕ್ಕೆ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ ಯುವಕನೋರ್ವನನ್ನು ಪ್ರೀತಿ ಮಾಡುತ್ತಿದ್ದಳು. ಈ ಸಮಯದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ಚಿತ್ರಿಸಿದ್ದ ಖಾಸಗಿ ವಿಡಿಯೋವೊಂದನ್ನು ಆತನೇ ತನ್ನ ಮೂವರು ಸ್ನೇಹಿತರಿಗೆ ಫಾರ್ವರ್ಡ್ ಮಾಡಿದ್ದಾನೆ. ಬಳಿಕ ವಿಡಿಯೋ ವ್ಯಾಪ ಕವಾಗಿ ವೈರಲ್ ಆಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಬಾಲಕಿಯ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

ಇತ್ತ ಮರ್ಯಾದೆಗೆ ಹೆದರಿ ಖಿನ್ನತೆಗೆ ತುತ್ತಾದ ಬಾಲಕಿ ಸೋಮವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾಳೆ ಎಂದು ಸರ್ದಾರ್ ನಗರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೇಮಂತ್ ಪಟೇಲ್ ತಿಳಿಸಿದ್ದಾರೆ. ಯುವಕನ ವಿರುದ್ದ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆ ಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾತ್ರವಲ್ಲದೆ ವಿಡಿಯೋ ವ್ಯಾಪಕವಾಗಿ ವೈರಲ್ ಆಗಲು ಕಾರಣರಾಗಿದ್ದ ಮೂವರು ಸ್ನೇಹಿತರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು