News Karnataka Kannada
Thursday, May 02 2024
ಗುಜರಾತ್

ಗುಜರಾತ್‌ನ ಸಿಎಂ ಭೂಪೇಂದ್ರ ಪಟೇಲ್‌ ಪ್ರಮಾಣ ವಚನಕ್ಕೆ ಕ್ಷಣಗಣನೆ

New Project (75)
Photo Credit :

ಗಾಂಧಿನಗರ: ಗುಜರಾತ್‌ನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಇಂದು ಅಪರಾಹ್ನ 2.20ಕ್ಕೆ ರಾಜ್ಯದ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಜಯ್‌ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 59ರ ಹರೆಯದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿತ್ತು.

ಭೂಪೇಂದ್ರ ಪಟೇಲ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್‌ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಪ್ರಮಾಣ ವಚನ ಸ್ವೀಕರಿಸುವಂತೆ ಭೂಪೇಂದ್ರ ಪಟೇಲ್ ಅವರನ್ನು ಭಾನುವಾರ ಆಹ್ವಾನಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು