ಸೂರತ್ : ಗುಜರಾತ್ ನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ಯಾಂಕರ್ ನಿಂದ ಕೆಮಿಕಲ್ ಸೋರಿಕೆಯಾಗಿ ಐವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಗುಜರಾತ್ ನ ಸೂರತ್ ಸಮೀಪದ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಟ್ಯಾಂಕರ್ ನಿಂದ ಕೆಮಿಕಲ್ ಸೋರಿಕೆಯಾಗಿ ಐವರು ಮೃತಪಟ್ಟಿದ್ದು, 20 ಜನರು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.