News Karnataka Kannada
Thursday, May 02 2024
ಗುಜರಾತ್

ಗುಜರಾತ್ ನಲ್ಲಿ ಕೋಮು ಸಂಘರ್ಷ : ಏಳು ಮಂದಿಯ ಬಂಧನ

Untitled 157
Photo Credit :

ಅಹಮದಾಬಾದ್: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಕಾಲೋಲ್ ಪಟ್ಟಣದಲ್ಲಿ ಸಣ್ಣ ವಿಷಯಕ್ಕೆ ಎರಡು ವಿಭಿನ್ನ ಸಮುದಾಯಗಳ ಕೆಲವು ಸದಸ್ಯರು ಘರ್ಷಣೆ ನಡೆಸಿದರು. ಆ ನಂತರ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿಮಾಂಶು ಸೋಲಂಕಿ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಹಿಂದೂಗಳು ಹಾಗೂ ಮುಸ್ಲಿಮರು ಇಬ್ಬರೂ ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ಎರಡು ಸಮುದಾಯಗಳ ಕೆಲವು ಸದಸ್ಯರು ಮದುವೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕೆಲವು ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆದ ನಂತರ, ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆಯಿತು’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಘಟನಾ ಸ್ಥಳದಿಂದ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾಲೋಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಂ.ಕೆ.ಮಾಳವೀಯ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು