ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಕರಾವಳಿಯಲ್ಲಿ ದೋಣಿಗಳು ಮಗುಚಿದ ಪರಿಣಾಮ 10 ಮೀನುಗಾರರು ನಾಪತ್ತೆಯಾಗಿದ್ದಾರೆ.
ಗುಜರಾತ್ ನಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅತಿಯಾದ ಗಾಳಿಯಿಂದ ಸುಮಾರು 10-12 ದೋಣಿಗಳು ಮಗುಚಿವೆ. ಈ ವೇಳೆ ದೋಣಿಗಳಲ್ಲಿದ್ದ 10 ಮೀನುಗಾರರು ಕಾಣೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅಧಿಕಾರಿಗಳು ಕಾಣೆಯಾದ ಮೀನುಗಾರರ ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈಗಾಗಲೇ ಗುಜರಾತ್ ನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿತ್ತು.