ನವದೆಹಲಿ : ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುಜರಾತ್ ನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.ಗುಜರಾತ್ ನಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೆ 25 ಮಂದಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ 10 ಮಂದಿಗೆ, ರಾಜಸ್ತಾನದಲ್ಲಿ 9, ಕರ್ನಾಟಕದಲ್ಲಿ 2 ಮತ್ತು ಗುಜರಾತ್ ನಲ್ಲಿ ಮೂವರು ಮತ್ತು ದೆಹಲಿಯಲ್ಲಿ ಒಬ್ಬರಿಗೆ ಒಮ್ರಿಕಾನ್ ರೂಪಾಂತರ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.