ಗುಜರಾತ್ ನ ನೂತನ ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಮಧ್ಯಾಹ್ನ 1.30ಕ್ಕೆ ಗಾಂಧಿನಗರದ ರಾಜಭವನದಲ್ಲಿ ನಡೆಯಲಿದೆ.
ಯಾರೆಲ್ಲ ಸಚಿವರಾಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ನೂತನ ಸಚಿವರ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇಂದು ಈ ಕುತೂಹಲಕ್ಕೆ ತೆರೆ ಬೀಳಲಿದೆ. ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದ್ದು, ಈ ವೇಳೆ ಬಿಜೆಪಿ ನೂತನ ಸಚಿವ ಸಂಪುಟದಲ್ಲಿ ‘ಪುನರಾವರ್ತನೆ ಇಲ್ಲ’ ಎಂಬ ಸೂತ್ರದ ಹಿನ್ನೆಲೆಯಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.