ಗುಜರಾತ್

ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ ವಿಧಿಸಿಲ್ಲ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸ್ಪಷ್ಟನೆ

ಗಾಂಧಿನಗರ : ಬೀದಿಬದಿಗಳಲ್ಲಿ ಗಾಡಿಗಳ ಮೇಲೆ ಮಾಂಸಾಹಾರ ಮಾರಾಟ ಆಗುತ್ತಿರುವ ಬಗ್ಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಬೀದಿಬದಿಯ ಮಾಂಸಾಹಾರ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿಷೇಧದ ಬೆನ್ನಲ್ಲೇ ಇದೀಗ ಭಾರಿ ವಿವಾದದ ಅಲೆ ಎದ್ದಿದೆ.

ಮಾಂಸಾಹಾರವನ್ನೇ ಗುಜರಾತ್‌ ಮುಖ್ಯಮಂತ್ರಿ ನಿಷೇಧಿದ್ದಾರೆ ಎಂದು ಎಲ್ಲೆಡೆ ಸುದ್ದಿಹರಿದಾಡುತ್ತಿದ್ದು, ಇದೀಗ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ನಮ್ಮ ಆಹಾರ ಪದ್ಧತಿಯನ್ನು ಸರ್ಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದಾಗಿದೆ.

ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ ವಿಧಿಸಿಲ್ಲ. ಆದರೆ ಬೀದಿ ಬದಿ ಗಾಡಿಗಳಲ್ಲಿ ಬೇಡ ಎಂದು ಹೇಳಲಾಗಿದೆಯಷ್ಟೇ. ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಸರ್ಕಾರಕ್ಕೆ ಅಸಮಧಾನವಾಗಲೀ, ತೊಂದರೆಯಾಗಲೀ ಇಲ್ಲ. ಹಲವಾರ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಒಂದಷ್ಟು ಜನರು ಸಸ್ಯಾಹಾರ ಸೇವಿಸುತ್ತಾರೆ. ಇನ್ನೊಂದಷ್ಟು ಮಂದಿ ಮಾಂಸಾಹಾರ ಸೇವನೆ ಮಾಡುತ್ತಾರೆ. ಆದರೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಸರ್ಕಾರಕ್ಕೆ ಅಸಮಾಧಾನ ಇಲ್ಲ. ಕೆಲವು ಸ್ಥಳಗಳಲ್ಲಿ ಇರುವ ಆಹಾರ ಮಾರಾಟ ಅಂಗಡಿ, ಕೈಗಾಡಿಗಳನ್ನು ತೆಗೆಯಬೇಕೆಂದು ಬೇಡಿಕೆ ಇದೆ. ಹೀಗಾಗಿ ಈ ಆದೇಶ ಜಾರಿಗೆ ತಂದಿದ್ದೇವೆ. ರಸ್ತೆ ಬದಿಯಲ್ಲಿ ಗಾಡಿಗಳಲ್ಲಿ ಆಹಾರ ತಯಾರಿಸಿ ಮಾರಾಟ ಮಾಡುವ ಅನೇಕರು ಸ್ವಚ್ಛತೆ ನಿರ್ವಹಣೆ ಮಾಡದಿರುವುದು ನಮಗೆ ಆತಂಕ ತಂದಿದೆ. ವಾಹನ ಮತ್ತು ಜನರ ಸಂಚಾರಕ್ಕೆ ಅನಾನೂಕೂಲ ಮಾಡುವ ಕೈಗಾಡಿಗಳನ್ನು ನಿರ್ಬಂಧಿಸುವ ನಿರ್ಧಾರ ತೆಗೆದುಕೊಂಡಿದ್ದು ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದು, ನೀವು ಯಾವುದೇ ಆಹಾರ ತಿನ್ನಿ ಎಂದಿದ್ದಾರೆ.

Gayathri SG

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

11 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

21 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

35 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago