Categories: ಗುಜರಾತ್

ವಿಶ್ವದ ಅತಿ ಎತ್ತರದ ಪ್ರತಿಮೆ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ

ಭಾರತದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಗುಜರಾತ್‌ ನ ಸರ್ಧಾರ್‌ ಸರೋವರ್‌ ಡ್ಯಾಂ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಪ್ರತಿಮೆಯಾದ ಏಕತೆಯ ಪ್ರತಿಮೆ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಶೇ.30.5 ಹೆಚ್ಚಳವಾಗಿದೆ.

ಪ್ರಸ್ತುತ ಪ್ರತಿನಿತ್ಯ ಸರಾಸರಿ 12,369 ಪ್ರವಾಸಿಗರು ಪ್ರತಿಮೆ ವೀಕ್ಷಿಸಲು ಆಗಮಿಸುತ್ತಿದ್ದಾರೆ. ಇದು ಕೊರೋನಾ ಪೂರ್ವ ಅವಧಿಗಿಂತಲೂ ಹೆಚ್ಚು. ಆ ಅವಧಿಯಲ್ಲಿ ಪ್ರತಿನಿತ್ಯ 10,194 ರಷ್ಟು ಪ್ರವಾಸಿಗರು ಆಗಮಿಸುತಿದ್ದರು.

ವಾರಾತ್ಯದ ದಿನಗಳಲ್ಲಿ ಪ್ರತಿಮೆ ಆವರಣ ಜನರಿಂದ ಗಿಜಿಗುಡುತ್ತಿರುತ್ತದೆ. ಆ ದಿನಗಳಲ್ಲಿ 18,187 ಜನರು ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 31, 2018 ರಂದು ತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕತಾ ಪ್ರತಿಮೆಯನ್ನು ಉದ್ಘಾಟಿಸಿದರು. ಉದ್ಘಾಟನೆಯಾದಾಗಿನಿಂದ ಇಲ್ಲಿಯವರೆಗೆ 7.94 ಮಿಲಿಯನ್ ಜನರು ಏಕತೆಯ ಪ್ರತಿಮೆಗೆ ಭೇಟಿ ನೀಡಿದ್ದಾರೆ.

ನವೆಂಬರ್ 2018 ರಿಂದ ಫೆಬ್ರವರಿ 2020 ರ ಅವಧಿಯಲ್ಲಿ ಟಿಕೆಟ್‌ಗಳನ್ನು ಮಾರಾಟ ಹಾಗೂ ಪಾರ್ಕಿಂಗ್ ಶುಲ್ಕಗಳಿಂದಲೇ ಸ್ಟ್ಯಾಚ್ಯೂ ಆಫ್ ಯೂನಿಟಿಗೆ ಬರೋಬ್ಬರಿ ₹ 116.31 ಕೋಟಿ ಆದಾಯ ಲಭಿಸಿದೆ ಎಂದು ಗುಜರಾತ್ ಸರ್ಕಾರ ಮಾಹಿತಿ ನೀಡಿದೆ.

Sneha Gowda

Recent Posts

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

10 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

18 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

34 mins ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

35 mins ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

52 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

1 hour ago