News Karnataka Kannada
Monday, April 29 2024
ಗುಜರಾತ್

ಸೂರತ್: ಉದ್ಯೋಗದ ಆಮಿಷವೊಡ್ಡಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ

Mass Rape 15 7 21
Photo Credit :

ಸೂರತ್ : ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ನಗ್ನ ಚಿತ್ರಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ಕೇಸ್ ದಾಖಲಾಗಿದೆ.

ಗುಜರಾತ್ ನ ಸೂರತ್ ನಲ್ಲಿ ಈ ಘಟನೆ ನಡೆದಿದ್ದು, 23 ವರ್ಷದ ಯುವಕ ನಿಲೇಶ್ ಲಾಥಿಯಾ ವಿರುದ್ಧ 35 ವರ್ಷದ ಸಂತ್ರಸ್ಥೆ ಆರೋಪಿಸಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ದೂರುದಾರರು ತಮ್ಮ ಪತಿ ಮತ್ತು ಮಗುವಿನೊಂದಿಗೆ ವಾಸಿಸುತ್ತಿದ್ದಾರೆ. ಒಂದು ವರ್ಷದ ಹಿಂದೆ ಮೋಟಾ ವರಚ ನಿವಾಸಿಯಾಗಿರುವ ನಿಲೇಶ್ ಲಾಥಿಯಾ ಜೊತೆಗೆ ಮಹಿಳೆಗೆ ಪರಿಚಯವಾಗಿದೆ. ಬಳಿಕ ಆಕೆಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ, ಸಂತ್ರಸ್ಥೆಯನ್ನು ಹೋಟೆಲ್‌ಗೆ ಕರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆಕೆಯ ನಗ್ನ ಛಾಯಾಚಿತ್ರಗಳನ್ನೂ ತೆಗೆದುಕೊಂಡು ನಂತರ ಆಕೆಯನ್ನು ಬ್ಲಾಕ್‌ಮೇಲ್ ಮಾಡಲು ಬಳಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆದ 10 ದಿನಗಳ ನಂತರ ನಿಲೇಶ್ ಮತ್ತೆ ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಆಕೆ ತನ್ನ ಬೇಡಿಕೆಯನ್ನು ತಿರಸ್ಕರಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ನಗ್ನ ಛಾಯಾಚಿತ್ರಗಳನ್ನು ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ನಂತರ ಆಕೆ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದೀಗ ಧೈರ್ಯ ತಂದುಕೊಂಡ ಮಹಿಳೆ, ಭಾನುವಾರ ಲಾಥಿಯಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು