News Karnataka Kannada
Monday, April 29 2024
ಗುಜರಾತ್

ಹೆಂಡತಿ ಮಕ್ಕಳ ಮುಂದೆಯೇ ಪತ್ರಕರ್ತನನ್ನು ಹತ್ಯೆಗೈದ ದುಷ್ಕರ್ಮಿಗಳು

Man murdered over girl's love affair
Photo Credit : IANS

ಗುಜರಾತ್‌ : ಪತ್ರಕರ್ತರೊಬ್ಬರನ್ನು ಹಾಡಹಗಲೇ ಅವರ ಹೆಂಡತಿ ಹಾಗೂ ಮಕ್ಕಳ ಮುಂದೆ ಭೀಕರವಾಗಿ ಕೊಲೆಗೈದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಾರಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಸೂರತ್ ಮೂಲದ 37 ವರ್ಷದ ಜುನೇದ್ ಖಾನ್ ಪಠಾಣ್ ಮೃತ ದುರ್ದೈವಿ.

ಜುನೇದ್ ಅವರನ್ನು ಹಾಡಹಗಲೇ ಅವರ ಪತ್ನಿ ಮತ್ತು ಮೂವರು ಪುತ್ರಿಯರ ಎದುರೇ ಹತ್ಯೆಗೈಯ್ಯಲಾಗಿದೆ. ನಾಲ್ಕು ಜನ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಅವರು ಮೊದಲು ಜುನೇದ್ ಅವರ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ ಹೊಡೆಸಿ, ನಂತರ ಚಾಕುವಿನಿಂದ ಇರಿದಿದ್ದಾರೆ.

ಜುನೇದ್ ಅವರು ತಮ್ಮ ಪತ್ನಿ, ಹತ್ತು, ನಾಲ್ಕು ಮತ್ತು ಎರಡೂವರೆ ವರ್ಷದ ಮೂವರು ಪುತ್ರಿಯರೊಂದಿಗೆ ಶಹಪೋರ್ ವಾಡ್‌ ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ‌.

ಜುನೇದ್ ಅವರು ಜನನಿಬಿಡ ಜಿಲಾನಿ ಸೇತುವೆಯನ್ನು ದಾಟುತ್ತಿದ್ದಾಗ ಹಿಂಬದಿಯಿಂದ ಬಂದ ಕಾರೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ನಲ್ಲಿದ್ದ ಎಲ್ಲರೂ ರಸ್ತೆಗೆ ಬಿದ್ದಿದ್ದಾರೆ. ತಕ್ಷಣ ಕಾರಿನಿಂದ ಕೆಳಗಿಳಿದ ನಾಲ್ವರು ಪಠಾಣ್ ಅವರ ಬೆನ್ನಿಗೆ ಚಾಕುವಿನಿಂದ ಇರಿದಿದ್ದಾರೆ. ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು