ವಡೋದರಾ: ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ವೇನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಎಂಟು ಮಂದಿ ಸ್ಥಳದಲ್ಲೇಮೃತಪಟ್ಟಿದ್ದು, ಕಾರು ಚಾಲಕ ಸುರೇಂದ್ರ ಸಿಂಗ್ ರಾವತ್ ಹಾಗೂ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಒಟ್ಟು ಹತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಸಿಸಿಟಿವಿ ದೃಶ್ಯದಲ್ಲಿ ಸೆರೆಯಾದಂತೆ ಕಾರು ಚಾಲಕ ಗಮನಿಸದೆ ವೇಗವಾಗಿ ಕಾರು ಚಲಾಯಿಸಿದ್ದಾರೆ. ಆದರೆ ಅತ್ತ ಕಡೆಯಿಂದ ಲಾರಿಯೊಂದು ಬಂದಿದೆ. ಕಾರು ವೇಗವಾಗಿ ಬಂದು ನಿಯಂತ್ರಿಸಲಾಗದೆ ಲಾರಿಗೆ ಗುದ್ದಿದೆ.
ಇನ್ನು ಈ ಬಗ್ಗೆ ಗುಜರಾತ್ನ ನಾಡಿಯಾಡ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…