News Karnataka Kannada
Monday, April 29 2024
ಗುಜರಾತ್

ಗರ್ಬಾ ನೃತ್ಯ ಅಭ್ಯಾಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

ಮೀನುಗಾರರೊಬ್ಬರು ಸಾಲ ಪಾವತಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.
Photo Credit : IANS

ಸೂರತ್: ಸೂರತ್ ನ ಸಮುದಾಯ ಭವನದಲ್ಲಿ ಗರ್ಬಾ ನೃತ್ಯ ಅಭ್ಯಾಸ ಮಾಡುತ್ತಿದ್ದ 26 ವರ್ಷದ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಪಾಲನ್ಪುರ ಗ್ರಾಮದ ನಿವಾಸಿ ರಾಜ್ ಮೋದಿ ಅವರು ಬುಧವಾರ ನಗರದ ಸೂರತ್ ಮುನ್ಸಿಪಲ್ ಕಾರ್ಪೊರೇಷನ್ನ ಸಮುದಾಯ ಭವನದಲ್ಲಿ ಸಾಂಪ್ರದಾಯಿಕ ಗರ್ಬಾ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಕುರ್ಚಿಯ ಮೇಲೆ ಕುಳಿತಾಗ ಕುಸಿದು ಬಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವನ ಸ್ನೇಹಿತರು ಅವನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲು ಆಸ್ಪತ್ರೆಗೆ ಆಗಮಿಸಿದರು. ಶವಪರೀಕ್ಷೆ ತಂಡದ ಭಾಗವಾಗಿದ್ದ ವೈದ್ಯರೊಬ್ಬರ ಜೊತೆ ಸಮಾಲೋಚನೆ ನಡೆಸಿದಾಗ ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಸೂರತ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದ್ದ ರಾಜ್ ಮೋದಿ, ಕಾರು ಶೋರೂಂನ ಸರ್ವಿಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು  ಅವರು ಡಿಸೆಂಬರ್ ನಲ್ಲಿ ಲಂಡನ್ ನಲ್ಲಿ ಹೆಚ್ಚಿನ ಅಧ್ಯಯನವನ್ನು ಮುಂದುವರಿಸುವ  ಕನಸನ್ನು ಕಟ್ಟಿಕೊಂಡಿದ್ದರು ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು