News Karnataka Kannada
Sunday, May 19 2024
ಗುಜರಾತ್

ಕಾಲಿನ ಮೂಲಕ ಮತ ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಯುವಕ

ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ.
Photo Credit : NewsKarnataka

ಗಾಂಧಿನಗರ: ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಕಾಲುಗಳ ಮೂಲಕ ತಮ್ಮ ಮತ ಚಲಾಯಿಸಿ ಎಲ್ಲರಿಗೂ ಸ್ಫೂರ್ತಿಯಾದ ಘಟನೆ ನಡೆದಿದೆ.

ಯುವಕ ಅಂಕಿತ್‌ ಸೋನಿಯ ಮತದಾನ ಮಾಡಿದ ಬಳಿಕ ಮಾತನಾಡಿ, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ.

ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದೆ. ಜೊತೆಗೆ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್‌ ಮಾಡಿ MBA ಮಾಡಿದೆ. ಕಳೆದ ಹಲವು ವರ್ಷಗಳಿಂದ ನಾನು ಹೀಗೆಯೇ ಮತ ಚಲಾಯಿಸುತ್ತಿದ್ದೇನೆ. ಜನರು ಹೊರಗೆ ಬಂದು ತಮ್ಮ ಅಮೂಲ್ಯವಾದ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

ಮೂರನೇ ಹಂತದ ಲೋಕಸಭೆ ಚುನಾವಣೆಯು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು